ವಾಲ್ಮೀಕಿ ಹಾಗೂ ವೀರಮದಕರಿ ನಾಯಕ ಮೂರ್ತಿ ಅನಾವರಣಗೊಳಿಸಿದ ಸುದೀಪ್.

78
firstsuddi

ರಾಯಚೂರು : ಸಿರವಾರ ತಾಲೂಕಿನ ಕುರಕುಂದ ಗ್ರಾಮದಲ್ಲಿ ನಟ ಕಿಚ್ಚ ಸುದೀಪ್ ಅವರು ಮಹರ್ಷಿ ವಾಲ್ಮೀಕಿ ಹಾಗೂ ವೀರಮದಕರಿ ನಾಯಕ ಮೂರ್ತಿ ಅನಾವರಣಗೊಳಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೂರ್ತಿ ಪ್ರತಿಷ್ಟಾಪನೆಗೆ ಹೊರಟಿದ್ದ ಅಭಿಮಾನಿಗಳ ಪ್ರೀತಿಗೆ ನಾನು ಶರಣು. ನನ್ನ ಮೂರ್ತಿ ಅನಾವರಣಕ್ಕೆ ನಾನು ಹೇಗೆ ಒಪ್ಪಿಕೊಳ್ಳಲಿ ಅದಕ್ಕೆ ಬೇಡ ಅಂದೆ. ತುಂಬಾ ಜನ ಸಾಧನೆ ಮಾಡಿದವರು ಇದ್ದಾರೆ ಅವರಿಗೆ ಗೌರವ ಸಲ್ಲಬೇಕು ಎಂದರು.

ನಾನು ಅಷ್ಟು ದೊಡ್ಡವನಲ್ಲ. ನಾನು ಸಾಧನೆ ಮಾಡಬೇಕಾದದ್ದು ಇನ್ನೂ ತುಂಬಾ ಇದೆ. ಮುಂದೆ ಅಂತಹ ದಿನ ಬಂದಾಗ ನನ್ನ ಮೂರ್ತಿ ಇಡಲಿ. ನಾನೇ ಬರ್ತಿನಿ. ನನ್ನ ಮೂರ್ತಿ ನಿರ್ಮಾಣವಾದ ಮೇಲೆ ನನಗೆ ವಿಚಾರ ಗೊತ್ತಾಗಿದ್ದು. ಇಲ್ಲ ಎಂದರೆ ನಾನು ಮೊದಲೇ ಬೇಡ ಅಂತಿದ್ದೆ. ನಾನು ಹೋರಾಟದಲ್ಲಿ ನೇರವಾಗಿ ಭಾಗವಹಿಸಬೇಕು ಅಂತೇನಿಲ್ಲ. ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿಗಾಗಿ ವಾಲ್ಮೀಕಿ ಸಮಾಜ ಶ್ರೀಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ಇವತ್ತು ಏನೇ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದ್ದರೂ ಅದು ಸಿನಿಮಾದಿಂದ ಬಂದ ದುಡ್ಡಲ್ಲಿ ಮಾಡುತ್ತಿದ್ದೇನೆ ಎಂದರು.

ಅಪ್ಪು ಬಗ್ಗೆ ನಾವು ಏನೇ ಮಾತನಾಡಿದರೂ ಅದು ಒಳ್ಳೆಯ ರೀತಿಯಲ್ಲೇ ಇರಬೇಕು. ನಮ್ಮ ತಂದೆ, ತಾಯಿ ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವು ನಡೆಯುತ್ತಿದ್ದೇವೆ. ಮನಸ್ಸಿಗೆ ಬಂದಿದ್ದನ್ನ ಮನಸ್ಪೂರ್ವಕವಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು.