ವಾಹನ ತಪಾಸಣೆ ವೇಳೆ ಮಹಿಳಾ ಪಿಎಸ್‍ಐ ಮೇಲೆ ವ್ಯಾನ್ ಹತ್ತಿಸಿ ಕೊಲೆ.. ಜಾರ್ಖಂಡ್‍ನಲ್ಲಿ ಭೀಕರ ಘಟನೆ…

66
firstsuddi

ರಾಂಚಿ : ವಾಹನ ತಪಾಸಣೆ ವೇಳೆ ಮಹಿಳಾ ಪಿಎಸ್ ಐ ಮೇಲೆ ಪಿಕಪ್ ವ್ಯಾನ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ.

ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ ಮೃತ ದುರ್ದೈವಿ. ಇವರನ್ನು ತೂಪುದಾನ ಪ್ರದೇಶದ ಪ್ರಭಾರಿಯಾಗಿ ನೇಮಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ.

ಹರಿಯಾಣದಲ್ಲಿ ನಿನ್ನೆ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ತೆರಳಿದ್ದ ಡಿಎಸ್ ಪಿ ಮೇಲೆ ಟ್ರಕ್ ಹರಿಸಿ, ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ. ಉಳಿದಂತೆ ಟ್ರಕ್ ಚಾಲಕ ಮತ್ತು ಇತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರಿಗೋಸ್ಕರ ಶೋಧಕಾರ್ಯ ಮುಂದುವರೆದಿದೆ.

ಘಟನೆಯಲ್ಲಿ ಸಾವನ್ನಪ್ಪಿರುವ ಡಿಎಸ್ ಪಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಘೋಷಣೆ ಮಾಡಿದ್ದಾರೆ. ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ.