ವಾಹನ ಸವಾರರೇ ಗಮನಿಸಿ.. ಪಿಯುಸಿ ಪ್ರಮಾಣ ಪತ್ರ ಇದ್ದರೆ ಮಾತ್ರ ಪೆಟ್ರೋಲ್, ಡೀಸೆಲ್

70
firstsuddi

ನವದೆಹಲಿ : ಪಿಯುಸಿ (Pollution Under Control) ಪ್ರಮಾಣ ಪತ್ರ ಹೊಂದಿದ್ದರೆ ಮಾತ್ರ ಬಂಕ್ ಗಳಲ್ಲಿ ಪೆಟ್ರೋಲ್, ಡೀಸೆಲ್ ನೀಡಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ನಿರ್ಧರಿಸಿದೆ. ಅದರಂತೆ ಅಕ್ಟೋಬರ್ 25 ರಿಂದ ನಿಯಮ ಜಾರಿಗೆ ಬರಲಿದೆ.

ಸೆಪ್ಟೆಂಬರ್ 29 ರಂದು ನಡೆದ ಪರಿಸರ, ಸಾರಿಗೆ ಮತ್ತು ಸಂಚಾರ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಆಮ್ ಆದ್ಮಿ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ಪ್ರಮಾಣಪತ್ರ ಇಲ್ಲದವರಿಗೆ ಇಂಧನ ತುಂಬುವ ಕೇಂದ್ರಗಳಲ್ಲಿ ಪೆಟ್ರೋಲ್ , ಡೀಸೆಲ್ ಮಾರಾಟ ನಿಷೇಧಿಸಲಾಗುತ್ತದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ವಾಯುಮಾಲಿನ್ಯ ಪರಿಶೀಲನೆ ಸಂಬಂಧ ಪರಿಸರ ಇಲಾಖೆಯು ವಾರ್ ರೂಂ ಅನ್ನು ಅಕ್ಟೋಬರ್ 3ರಿಂದ ಸ್ಥಾಪಿಸಲಾಗುವುದು. ದೆಹಲಿಯಲ್ಲಿ ವಾಯು ಮಾಲಿನ್ಯಕ್ಕೆ ತಿದ್ದುಪಡಿಯಾದ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಪರಿಣಾಮಕಾರಿ ಅನುಷ್ಠಾನಗೊಳಿಸಲಾಗುವುದು ಎಂದು ರೈ ಹೇಳಿದ್ದಾರೆ.