ವಿಟ್ಲ : ಕೋಮು ಸೌಹಾರ್ದಕ್ಕೆ ಧಕ್ಕೆ; ಆರೋಪಿ ವಶಕ್ಕೆ…

167
firstsuddi

ವಿಟ್ಲ: ಕೋಮು ಸೌಹಾರ್ದಕ್ಕೆ ಧಕ್ಕೆಯನ್ನುಂಟು ಮಾಡಲು ಯತ್ನಿಸಿದ ಆರೋಪದ ಮೇರೆಗೆ ವ್ಯಕ್ತಿಯೊರ್ವನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೆರುವಾಯಿ ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅನ್ವರ್ ಪೊಲೀಸರ ವಶದಲ್ಲಿರುವ ವ್ಯಕ್ತಿ. ವಾಮಂಜೂರು ಮೂಲದ ವಿದೇಶದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬನಿಗೆ ಭಾರತದಲ್ಲಿ ಜಾರಿಯಾಗಲಿರುವ ಸಿಎಎ ಹಾಗೂ ಎನ್ ಆರ್ ಸಿ ವಿಚಾರದಲ್ಲಿ ಮಾತನಾಡಿ, ವಿದೇಶದಲ್ಲಿದ್ದ ಅನ್ವರ್ ಎಂಬಾತನು ಕೋಮು ಸೌಹಾರ್ದಕ್ಕೆ ಧಕ್ಕೆಯುಂಟು ಮಾಡಿದ್ದಾರೆಂದು ಆರೋಪಿಸಿ ಯತೀಶ್ ಎಂಬವರು ಪೊಲೀಸ್ ದೂರು ನೀಡಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅನ್ವರ್ ಊರಿಗೆ ಬಂದಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.