ವಿದ್ಯಾ ಬಾಲನ್ ಹೆಸರಿನಲ್ಲಿ ವಂಚನೆ: ದೂರು ದಾಖಲಿಸಿದ ನಟಿ…

60
firstsuddi

ಬಾಲಿವುಡ್​ನ ಖ್ಯಾತ ನಟಿ ವಿದ್ಯಾ ಬಾಲನ್ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ನಕಲಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ತೆರೆದು ಹಣ ವಸೂಲಿ ಮಾಡುವ ದಂಧೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯ ಈಗ ಬೆಳಕಿಗೆ ಬಂದಿದ್ದು, ವಿದ್ಯಾ ಬಾಲನ್ ಅವರು ಪೊಲೀಸ್ ಠಾಣೆ ಮಟ್ಟಿಲೇರಿದ್ದಾರೆ.

ತಮ್ಮ ಹೆಸರನ್ನು ಬಳಸಿಕೊಂಡು ಕೆಲವರು ಹಣ ಮಾಡುತ್ತಿದ್ದಾರೆ. ನನ್ನ ಹೆಸರನ್ನು ಅವರು ದುರ್ಬಳಕ್ಕೆ ಮಾಡುತ್ತಿದ್ದಾರೆ. ನನ್ನ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಖಾತೆ ತೆರೆದು ಇಂತಹ ಕೆಲಸ ಮಾಡುತ್ತಿರುವವರನ್ನು ಪತ್ತೆ ಮಾಡಿ, ಅವರನ್ನು ಬಂಧಿಸಿ, ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಸಲ್ಮಾನ್ ಖಾನ್ ಅವರ ಹೆಸರು ದುರ್ಬಳಕೆ ಆಗಿತ್ತು. ಈಗ ವಿದ್ಯಾ ಬಾಲನ್ ಅವರ ಹೆಸರು ಬಳಸಿಕೊಂಡು ಜನರಿಗೆ ವಂಚನೆ ಮಾಡಿದ್ದು ತಿಳಿದುಬಂದಿದೆ. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ವಿದ್ಯಾ ಬಾಲನ್ ಅವರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ. ತಮಗೆ ಸೂಕ್ತವಾದ ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ‘ಭೂಲ್ ಭುಲಯ್ಯ 3’ ಸಿನಿಮಾಗೆ ಅವರು ಸಹಿ ಮಾಡಿದ್ದಾರೆ.