ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ವಸತಿ ಶಾಲೆಯ ಪ್ರಾಂಶುಪಾಲ ಅರೆಸ್ಟ್…

57
firstsuddi

ಯಾದಗಿರಿ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಲ್ಲೆಯ ಮೋಟನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಗಾಳೆಪ್ಪ ಪೂಜಾರಿ(40)ಯನ್ನು ಪೋಕ್ಸೋ ಪ್ರಕರಣದಡಿ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 26ರಂದು ಆರೋಪಿ ಮೊಬೈಲ್ ಫೋನ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದಳು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡಿದ್ದರು. ವಿದ್ಯಾರ್ಥಿನಿಯರ ಸಮಾಲೋಚನೆ ನಡೆಸಿ, ಕ್ರಮ ಕೈಗೊಳ್ಳಲಾಗಿತ್ತು. ಆರೋಪಿಯನ್ನು ಪ್ರಾಂಶುಪಾಲ ಹುದ್ದೆಯಿಂದ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.