ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ- 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ವಿದ್ಯುತ್ ಶಾಕ್…

52
firstsuddi

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹರಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ.

ಬಸ್​ನಲ್ಲಿದ್ದ 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ವಿದ್ಯುತ್ ಶಾಕ್ ತಗುಲಿದ್ದು, ಶಾಕ್​ನಿಂದ 35 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಈ ಖಾಸಗಿ ಬಸ್ ಹೊಳೆಬಾಗಿಲಿನಿಂದ ಸಾಗರಕ್ಕೆ ಹೊರಟಿತ್ತು. ಬಸ್​ನಲ್ಲಿ 45 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದರಲ್ಲಿ 35 ಪ್ರಯಾಣಿಕರು ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.