ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದಾರುಣ ಸಾವು…

59
firstsuddi

ತುಮಕೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಇಂದು ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

ವೀರಭದ್ರಯ್ಯ ಎಂಬುವರ ಮಗ ಯತೀಶ್ (14), ಸಿದ್ದಲಿಂಗಯ್ಯ ಎಂಬುವರ ಮಗ ಪ್ರಜ್ವಲ್ (14) ಮೃತ ದುರ್ದೈವಿಗಳು. ಇಬ್ಬರು ಅಕ್ಕಪಕ್ಕದ ಮನೆ ನಿವಾಸಿಗಳು. ಮನೆಯ ಮೇಲೆ ಆಟವಾಡುತ್ತಿದ್ದಾಗ ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.

ಕೆಇಬಿ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.