ವಿದ್ಯುತ್ ತಂತಿ ಸ್ಪರ್ಶಿಸಿ 14 ವರ್ಷದ ಬಾಲಕ ಸಾವು…

79
firstsuddi

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ನಡೆದಿದೆ.

ಕಾಶಿನಾಥ್ ಚೌಹಾಣ್ (14) ಮೃತ ಬಾಲಕ. ಮನೆ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತ ನಾಟಿ ಮಾಡಲು ಹೋದಾಗ ಈ ಅವಘಡ ಸಂಭವಿಸಿದೆ.

ಘಟನೆ ಸಂಬಂಧ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.