ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ…

60
firstsuddi

ಕೊಪ್ಪಳ: ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಘೋಷಿಸಿರುವ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣಕಾಸು ಹೊಂದಾಣಿಕೆ ಜತೆಗೆ ಅರ್ಹ ಫಲಾನುಭವಿಗಳ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಗ್ಯಾರಂಟಿಗಳನ್ನು ಹೇಗೆಲ್ಲ ಜಾರಿಗೆ ತರಬೇಕು ಎನ್ನುವ ಮಾರ್ಗಸೂಚಿಗಳನ್ನು ತಯಾರಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಅಧಿಕಾರಕ್ಕೆ ಬಂದರೆ 200 ಯುನಿಟ್ ಕರೆಂಟ್ ಫ್ರೀ ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ.

ಜಿಲ್ಲೆಯ ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಲೈನ್ ಮ್ಯಾನ್ ಮಂಜುನಾಥ ಬಿಲ್ ವಸೂಲಿಗೆ ತೆರಳಿದ್ದರು. ಈ ವೇಳೆ ವಿದ್ಯುತ್ ಬಿಲ್ ಕಟ್ಟಲ್ಲ, ಕರೆಂಟ್ ಫ್ರೀ ಎಂದು ಹೇಳಿದ್ದಾರೆ, ಅಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಲಾಗಿದೆ.

ಹಲ್ಲೆ ನಡೆಸಿದ ಚಂದ್ರಶೇಖರಯ್ಯ ವಿರುದ್ಧ ಮಂಜುನಾಥ್, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.