ವಿಧಾನ ಪರಿಷತ್ ಚುನಾವಣೆ : ಮಧ್ಯ ಮಾರಾಟ ನಿಷೇಧ…

72
firstsuddi

ಮಂಗಳೂರು : ರಾಜ್ಯ ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆ ಇದೇ ಡಿ.10 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಮದ್ಯ ಮುಕ್ತ ದಿನವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.

ರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮ 1967 ರ 10 (ಬಿ) ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಡಿ. 09 ರ ಮಧ್ಯರಾತ್ರಿ 12 ಗಂಟೆಯಿಂದ ಡಿ. 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ವಿವಿಧ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.