ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದರು. ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು.
ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದ್ದರು.










