ವಿಧಾನ ಪರಿಷತ್ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಹೆಸರು ಅಂತಿಮ…

58
firstsuddi

ಬೆಂಗಳೂರು : ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಮೇಲ್ಮನೆ ಎಂಟ್ರಿ ಬಹುತೇಕ ಖಚಿತವಾಗಿದೆ.

ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಹೆಸರು ಅಂತಿಮಗೊಳಿಸಲಾಗಿದೆ. ಬಿಜೆಪಿ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಮಾಜಿ ಸಚಿವ ಲಕ್ಷ್ಮಣ್ ಸವದಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಎಂ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ನಿರ್ಮಲಾ ಕುಮಾರ್ ಸುರಾನಾ, ಮಹೇಶ್ ಟೆಂಗಿನಕಾಯಿ, ಓಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೆಸರುಗಳನ್ನು ಉಳಿದ ಸ್ಥಾನಗಳಿಗೆ ಶಿಫಾರಸು ಮಾಡಲಾಗಿದೆ.