ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ ಸ್ಪರ್ಧಿಸುವುದಿಲ್ಲ : ಸತೀಶ್ ಚಂದ್ರ ಮಿಶ್ರಾ.

89
firstsuddi

ಉತ್ತರಪ್ರದೇಶ : ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಎಸ್ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ಅವರು ಹೇಳಿದ್ದಾರೆ.

ಮಾಜಿ ಸಿಎಂ ಮಾಯಾವತಿ ಈ ಹಿಂದೆ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ನಾನು ಮತ್ತು ಮಾಯಾವತಿ ಇಬ್ಬರು ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.

ಸಮಾಜವಾದಿ ಪಕ್ಷವಾಗಲಿ ಅಥವಾ ಬಿಜೆಪಿಯಾಗಲಿ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ ಸತೀಶ್ ಚಂದ್ರ ಮಿಶ್ರಾ ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಚುನಾವಣಾ ಆಯೋಗ ಪಂಚರಾಜ್ಯಗಳ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.