ವಿಧಾನಸಭೆ ಅಧಿವೇಶನ ವೇಳೆ ಅಶ್ಲೀಲ ದೃಶ್ಯ ವೀಕ್ಷಿಸಿದ ಬಿಜೆಪಿ ಶಾಸಕ – ವಿಡಿಯೋ ವೈರಲ್…

41
firstsuddi

ದಿಸ್ಪುರ್ : ವಿಧಾನಸಭೆಯ ಅಧಿವೇಶನದ ವೇಳೆ ತ್ರಿಪುರದ ಬಿಜೆಪಿ ಶಾಸಕ ತಮ್ಮ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಗೆಲುವಿನೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿದೆ. ಕಮ್ಯುನಿಸ್ಟ್ ಪಕ್ಷಗಳ ಭದ್ರಕೋಟೆಯಾಗಿರುವ ಈ ರಾಜ್ಯದಲ್ಲಿ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿರುವ ಬಿಜೆಪಿ ಶಾಸಕರೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ತ್ರಿಪುರಾದ ಬಾಗ್ ಬಾಸಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ಅಶ್ಲೀಲ ದೃಶ್ಯ ವೀಕ್ಷಿಸಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಚರ್ಚೆಯಾಗುತ್ತಿದ್ದ ವೇಳೆ ಶಾಸಕ ಮೊಬೈಲ್ ನಲ್ಲಿ ನೋಡುತ್ತಿರುವ ದೃಶ್ಯಗಳನ್ನು ಹಿಂಬದಿ ಕುಳಿತಿದ್ದ ವ್ಯಕ್ತಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಪಕ್ಷ, ಶಾಸಕನಿಂದ ಸ್ಪಷ್ಟನೆ ಕೇಳಿದ್ದು, ಶಾಸಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.