ವಿಮಾನದಲ್ಲಿ ತಾಂತ್ರಿಕ ದೋಷ – ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲು ಸಿಎಂ ಬೊಮ್ಮಾಯಿ ನಿರ್ಧಾರ…

221
firstsuddi

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ಇಂದು ಸಿಎಂ ಬಿಜೆಪಿ ಕಾರ್ಯಕಾರಿಣಿಯ ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ಸಿಎಂ ಇದ್ದ ವಿಮಾನ ಬೆಳಗ್ಗೆ 8.45ಕ್ಕೆ ಎಚ್‌ಎಎಲ್‌ನಿಂದ ಟೇಕ್ ಆಫ್ ಆಗಿ 9:45ರ ಸುಮಾರಿಗೆ ಹುಬ್ಬಳ್ಳಿಗೆ ಆಗಮಿಸಬೇಕಿತ್ತು. ಆದರೆ ಸಿಎಂ ವಿಮಾನದಲ್ಲಿ ಬೆಳಗ್ಗೆ ತಾಂತ್ರಿಕ ದೋಷ ಕಂಡು ಬಂದ ಕಾರಣ ಕ್ಲಿಯರೆನ್ಸ್ ಸಿಗಲಿಲ್ಲ. ಹೀಗಾಗಿ ಪ್ರಯಾಣ ವಿಳಂಬವಾಗಿದೆ. ಸಿಎಂ 2 ಗಂಟೆ ಕಾದರೂ ಪ್ರಯೋಜನವಾಗದ ಕಾರಣ ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಹವಾಮಾನ ವೈಪರೀತ್ಯದಿಂದಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಇದ್ದ ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆ ಉಂಟಾಗಿತ್ತು.