ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 119 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ…

60
firstsuddi

ನವದೆಹಲಿ : ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 119 ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.

10 ಪದ್ಮಭೂಷಣ, 7 ಪದ್ಮವಿಭೂಷಣ, ಮತ್ತು 102 ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಮತ್ತು ಒಬ್ಬರು ಟ್ರಾನ್ಸ್ ಜೆಂಡರ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು, ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಮ್ಪಾಲ್, ನಿವೃತ್ತ ಏರ್ ಮಾರ್ಷಲ್ ಡಾ. ಪದ್ಮಾ ಬಂಡೋಪಾದ್ಯಾಯ, ಬಾಲಿವುಡ್ ನಟಿ ಕಂಗನಾ ರಣಾವತ್, ಸೇರಿದಂತೆ ಹಲವರು ಇಂದು ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಸ್ವೀಕರಿಸಿದರು.

ಕಲೆ ವಿಭಾಗದಲ್ಲಿ ಬಿ.ಮಂಜಮ್ಮ ಜೋಗತಿ, ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್, ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆಗಾಗಿ ಕೆ.ವೈ.ವೆಂಕಟೇಶ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದ್ದಾರೆ.

ಕೇಂದ್ರದ ಮಾಜಿ ಸಚಿವೆ ದಿ.ಸುಷ್ಮಾ ಸ್ವರಾಜ್, ದಿ.ಜಾರ್ಜ್ ಫರ್ನಾಂಡಿಸ್, ದಿ.ಅರುಣ್ ಜೇಟ್ಲಿ, ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ, ಮಾಜಿ ವಿದೇಶಾಂಗ ವ್ಯವಹಾರ ಸಚಿವೆಯಾಗಿದ್ದ ದಿ.ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅವರ ಪರವಾಗಿ ಪುತ್ರಿ ಬಾನ್ಸುರಿ ಸ್ವರಾಜ್ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು