ವಿಶ್ವಾಸಮತ ಗೆಲ್ಲುವಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಯಶಸ್ವಿ…

57
firstsuddi

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಧಾನಸಭೆಯಲ್ಲಿ ವಿಶ್ವಾಸಮತ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ 48 ಶಾಸಕರು ಹೇಮಂತ್ ಸೊರೆನ್ ಪರವಾಗಿ ಮತ ಚಲಾಯಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಸದನದಿಂದ ಹೊರನಡೆದಿದೆ.

ವಿಶ್ವಾಸಮತ ಯಾಚನೆಯ ಹಿನ್ನೆಲೆಯಲ್ಲಿ 5 ದಿನಗಳ ಹಿಂದೆ ನೆರೆಯ ಛತ್ತೀಸ್ ಗಢದಲ್ಲಿ ಆಶ್ರಯ ಪಡೆದಿದ್ದ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಯುಪಿಎ ಮೈತ್ರಿಕೂಟದ 30 ಶಾಸಕರು ನಿನ್ನೆ ಸಂಜೆ ರಾಂಚಿಗೆ ಮರಳಿದ್ದರು. ಗಣಿಗಾರಿಕೆಗೆ ಗುತ್ತಿಗೆ ನೀಡುವ ಮೂಲಕ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹೇಮಂತ್ ಸೊರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಹೇಳಿತ್ತು.

ಮತದಾನದ ಮೊದಲು ಮಾತನಾಡಿದ ಹೇಮಂತ್ ಸೊರೆನ್, ಚುನಾವಣೆಯಲ್ಲಿ ಗೆಲ್ಲಲು ಗಲಭೆಗಳನ್ನು ಉತ್ತೇಜಿಸುವ ಮೂಲಕ ಬಿಜೆಪಿ ದೇಶದಲ್ಲಿ ಅಂತರ್ಯುದ್ಧದಂತಹ ಪರಿಸ್ಥಿತಿಯನ್ನು ತರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.