ವಿಶ್ವಾಸಮತ ಸಾಬೀತು ಮಾಡುವುದಕ್ಕೂ ಮುನ್ನವೇ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಜಿತ್ ಪವಾರ್…

160
firstsuddi

ಮುಂಬೈ : ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬಹುಮತ ಸಾಬೀತು ಪಡಿಸುವಂತೆ ಆದೇಶ ನೀಡಿದ್ದ ಬೆನ್ನಲ್ಲೇ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ನಾಳೆ ಸಂಜೆ 5ಗಂಟೆಯೊಳಗೆ ಬಹುಮತ ಸಾಬೀತು ಪಡಿಸುವುದಾಗಿ ಆದೇಶ ಹೊರಡಿಸಿತ್ತು. ಆದರೆ ಬಹುಮತ ಸಾಬೀತು ಪಡಿಸುವುದಕ್ಕೂ ಮುನ್ನವೇ ಅಜಿತ್ ಪವಾರ್ ಅವರು ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಹುಮತ ಸಾಬೀತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ.