ವಿಷ ಸೇವಿಸಿ ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಯತ್ನ – ಮೇಲಾಧಿಕಾರಿ ಕಿರುಕುಳ ಆರೋಪ…

89
firstsuddi

ಹುಬ್ಬಳ್ಳಿ : ಆರೋಗ್ಯ ನಿರೀಕ್ಷಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

 ನೂಲ್ವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದ ಮೆಹಬೂಬ್ ಸಾಬ್ ಸೂಡಿ ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ. ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.