ಬೆಳಗಾವಿ : ವಿಷಹಾರ ಸೇವಿಸಿ ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳು. ಭಾನುವಾರ ಹೊಲಕ್ಕೆ ಕೆಲಸಕ್ಕೆಂದು ತೆರಳಿದ್ದ ತಾಯಿ, ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದಾರೆ. ಈ ವೇಳೆ ಇಬ್ಬರೂ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳೀಯರು ತಾಯಿ-ಮಗನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ.
ನಿನ್ನೆ ಮರಣೋತ್ತರ ಪರೀಕ್ಷೆ ನಡೆಸಿ ತಾಯಿ, ಮಗನ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










