ವೀಕೆಂಡ್ ನಲ್ಲಿ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರಿಗಿಲ್ಲ ಪ್ರವೇಶ…

90
firstsuddi

ಶಿವಮೊಗ್ಗ : ಕೋವಿಡ್ ಮೂರನೇ ಅಲೆ ಭೀತಿ ಹಿನ್ನಲೆ ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಸಿಗಂದೂರು ದೇವಾಲಯ ವಾರಾಂತ್ಯದಲ್ಲಿ ಬಂದ್ ಆಗಲಿದ್ದು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಅಲ್ಲದೇ ಸಾಮಾನ್ಯ ದಿನಗಳಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆಗಿಂತ ವಾರಾಂತ್ಯದ ದಿನಗಳಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ಜಿಲ್ಲಾಡಳಿತ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವೀಕೆಂಡ್ ನಲ್ಲಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.

ಅಲ್ಲದೇ, ಇಂದಿನಿಂದ ಆಗಸ್ಟ್ 13 ರವರೆಗೆ ಎಲ್ಲಾ ಸೇವೆಗಳು ಸ್ಥಗಿತಗೊಳ್ಳಲಿದ್ದು, ಭಕ್ತರಿಗೆ ಕೇವಲ ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ.