ವೀರೇಂದ್ರ ಹೆಗ್ಗಡೆ, ವಿಜಯೇಂದ್ರ ಪ್ರಸಾದ್, ಪಿಟಿ ಉಷಾ, ಇಳಯರಾಜ ರಾಜ್ಯಸಭೆಗೆ ನಾಮನಿರ್ದೇಶನ…

55
firstsuddi

ನವದೆಹಲಿ : ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ಕೇಂದ್ರ ಸರ್ಕಾರ ನಾಮನಿರ್ದೇಶನ ಮಾಡಿದೆ.

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ನಾಲ್ವರು ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾಗಿದ್ದಾರೆ. ವೀರೇಂದ್ರ ಹೆಗ್ಗಡೆ ಶಿಕ್ಷಣ, ಆರೋಗ್ಯ, ಆಧ್ಯಾತ್ಮಿಕ, ಸಮಾಜಸೇವೆ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರೆ, ಇಳೆಯರಾಜ ಭಾರತೀಯ ಸಿನಿಮಾ ಸಂಗೀತದಲ್ಲಿ ಚಿರಪರಿಚಿತರು. ಇನ್ನು ಪಿಟಿ ಉಷಾ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡದ್ದರೆ, ವಿಜಯೇಂದ್ರ ಪ್ರಸಾದ್ ಸಿನಿಮಾ ಕಥೆಗಾರರಾಗಿ ಹೆಸರು ಮಾಡಿದ್ದಾರೆ. ಇನ್ನು ನಾಲ್ಕು ನಾಮನಿರ್ದೇಶಿತ ಪ್ರತಿನಿಧಿಗಳಲ್ಲಿ ನಾಲ್ವರು ದಕ್ಷಿಣ ಭಾರತದ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುತ್ತಾರೆ.

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಸಾಧಕರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆಂದು ಮೋದಿ ಟ್ವೀಟ್ ಮಾಡಿದ್ದಾರೆ.