ವೃದ್ಧನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ 15 ಲಕ್ಷಕ್ಕೆ ಬೇಡಿಕೆ – ಖತರ್ನಾಕ್ ಆಂಟಿ ಅರೆಸ್ಟ್..!

66
firstsuddi

ದಾವಣಗೆರೆ : ವೃದ್ಧನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ 15 ಲಕ್ಷಕ್ಕೆ ಬೇಡಿಕೆ ಇಟ್ಟ ಖತರ್ನಾಕ್ ಆಂಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಶಿವಕುಮಾರ ಸ್ವಾಮಿ ಬಡಾವಣೆ ನಿವಾಸಿ 79 ವರ್ಷದ ಚಿದಾನಂದಪ್ಪ ಹನಿಟ್ರ್ಯಾಪ್ ಗೆ ಸಿಲುಕಿದ ವೃದ್ಧ. ಶಿವಕುಮಾರ ಸ್ವಾಮಿ ಬಡಾವಣೆಗೆ ಹೊಂದಿಕೊಂಡ ಸರಸ್ವತಿ ನಗರದ ನಿವಾಸಿ 32 ವರ್ಷದ ಯಶೋಧ ಜೊತೆಗೆ ವೃದ್ಧನಿಗೆ ಪರಿಚಯವಾಗಿದೆ. ಹೀಗೆ ಪರಿಚಯವಾಗಿ ಇಬ್ಬರ ನಡುವೆ ಸ್ನೇಹವಾಗಿದೆ. ನಂತರ ಯಶೋಧ, ಚಿದಾನಂದಪ್ಪ ಅವರನ್ನು ಮನೆಗೆ ಆಹ್ವಾನಿಸಿ ಆಗಾಗ ಟೀ, ಕಾಫಿ ಜ್ಯೂಸ್ ಕೊಡುತ್ತಿದ್ದಳು. ಹೀಗೆ ಯಶೋಧ ಚಿದಾನಂದಪ್ಪ ಅವರ ಬಳಿ ಆಗಾಗ ನೆಪಗಳನ್ನು ಹೇಳಿ ಐದು, ಹತ್ತು ಅಂತ ಬರೋಬ್ಬರಿ 86 ಸಾವಿರ ರೂಪಾಯಿ ಸಾಲ ಪಡೆದಿದ್ದಾಳೆ. ಕೆಲಸದಿಂದ ನಿವೃತ್ತಿರಾಗಿದ್ದ ವೃದ್ಧ ನಂತರ ಹಣ ವಾಪಸ್ ಕೊಡುವಂತೆ ಕೇಳಿದ್ದಾನೆ. ಆಗ ಈಗ ಅಂತಾ ಹೇಳಿ ಆ ಮಹಿಳೆ ಹಣ ವಾಪಸ್ ಕೊಟ್ಟಿರಲಿಲ್ಲ.

ಒಂದು ದಿನ ವಾಕಿಂಗ್ ಮುಗಿಸಿ ಹೋಗುತ್ತಿದ್ದಾಗ ಯಶೋಧ ಚಿದಾನಂದಪ್ಪನನ್ನು ಅಕ್ಕರೆಯಿಂದ ಮನೆಗೆ ಕರೆದು ಜ್ಯೂಸ್ ಕೊಟ್ಟಿದ್ದಾಳೆ. ಕುಡಿದ ಕೆಲ ಹೊತ್ತಿನಲ್ಲಿಯೇ ವೃದ್ಧ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾರೆ. ಎಚ್ಚರವಾದ ಬಳಿಕ ಚಿದಾನಂದಪ್ಪ ಮೈ ಮೇಲೆ ಬಟ್ಟೆ ಇರಲಿಲ್ಲ. ಭಯಗೊಂಡ ಚಿದಾನಂದಪ್ಪ ಬಟ್ಟೆ ಹಾಕಿಕೊಂಡು ಮನೆಗೆ ಬಂದಿದ್ದಾರೆ. ಈ ಘಟನೆ ನಡೆದು ಎರಡು ದಿನಕ್ಕೆ ಹಣಕ್ಕಾಗಿ ಮತ್ತೆ ಚಿದಾನಂದಪ್ಪ ಫೋನ್ ಮಾಡಿದ್ದಾರೆ. ಆಗ ನೀ ನನ್ನ ಜೊತೆ ಮಲಗಿರುವೆ. ನನ್ನ ಬಳಿ ವೀಡಿಯೋ ಇದೆ. 15 ಲಕ್ಷ ಕೊಡು. ಇಲ್ಲ ನಿನ್ನ ಹೆಂಡತಿ ಮಕ್ಕಳಿಗೆ ತೋರಿಸುವೆ ಎಂದಿದ್ದಾಳೆ. ಹೆದರಿ ಈ ವಿಚಾರ ಪರಿಚಯದವರ ಬಳಿ ಚಿದಾನಂದಪ್ಪ ಹೇಳಿಕೊಂಡಿದ್ದಾರೆ.

ಚಿದಾನಂದಪ್ಪ 7 ರಿಂದ 8 ಲಕ್ಷಕ್ಕೆ ಮಾತನಾಡಿ ಡೀಲ್ ಮುಗಿಸಲು ಮುಂದಾಗಿದ್ದಾರೆ. ಆದರೆ ಯಶೋಧ ಮಾತ್ರ 15 ಲಕ್ಷ ಬೇಕೆ, ಬೇಕು ಎಂದು ಪಟ್ಟು ಹಿಡಿದಿದ್ದಾಳೆ. ಇದೇ ವೇಳೆ ಚಿದಾನಂದಪ್ಪರ ವಾಟ್ಸಪ್ ಗೆ ಒಂದು ನಗ್ನವಾದ ಫೋಟೋ ಅವಳ ಮುಖ ಕಾಣದ ಹಾಗೆ ಮಾಡಿ ಕಳುಹಿಸಿದ್ದಾಳೆ. ಈ ವಿಚಾರ ಚಿದಾನಂದಪ್ಪ ತನ್ನ ಪುತ್ರನಿಗೆ ಹೇಳಿದ್ದಾರೆ. ಆಗ ಈ ವಿಚಾರ ಪೊಲೀಸರ ಗಮನಕ್ಕೆ ಬಂದಿದೆ. ಕೆಟಿಜೆ ನಗರ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ಯಶೋಧಳನ್ನ ಬಂಧಿಸಿದ್ದಾರೆ.