ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ- ಒಂದೇ ಕುಟುಂಬದ ಮೂವರು ಸಾವು…

43
firstsuddi

ನವದೆಹಲಿ: ದೆಹಲಿಯ ನೆರೆಯ ಗ್ರೇಟರ್ ನೋಯ್ಡಾದಲ್ಲಿ ವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಬೈಕ್‌ನಲ್ಲಿದ್ದ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಗ್ರೇಟರ್ ನೋಯ್ಡಾದ ಕ್ರಾಸಿಂಗ್ ಪ್ಯಾರಿ ಚೌಕ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಸುರೇಂದ್ರ ಎಂಬಾತ ತನ್ನ ಸಹೋದರಿಯರೊಂದಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದಾಗ ಅಪಘಾತವಾಗಿದೆ. ಸುರೇಂದ್ರ ಸಹೋದರಿಯರಾದ ಶೈಲಿ ಮತ್ತು ಅಂಶು ಕೂಡ ಮೃತಪಟ್ಟಿದ್ದಾರೆ.

ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ವ್ಯಕ್ತಿ ಮತ್ತು ಆತನ ಸಹೋದರಿಯರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸುರೇಂದ್ರ ತನ್ನ ಸಹೋದರಿಯರೊಂದಿಗೆ ನೋಯ್ಡಾದ ಕುಲೇಸರ ಎಂಬ ತಮ್ಮ ನಿವಾಸಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೈಕ್‌ಗೆ ಡಿಕ್ಕಿ ಹೊಡೆದ ವಾಹನವನ್ನು ಪೊಲೀಸರು ಇನ್ನೂ ಗುರುತಿಸಿಲ್ಲ. ವಾಹನವನ್ನು ಪತ್ತೆಹಚ್ಚಲು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ.