ವೈದ್ಯರ ನಿರ್ಲಕ್ಷದಿಂದ ನವಜಾತ ಶಿಶು ಸಾವು…

189
firstsuddi

ಮೈಸೂರು : ವೈದ್ಯರ ನಿರ್ಲಕ್ಷದಿಂದ ನವಜಾತ ಶಿಶು ಮೃತಪಟ್ಟಿರುವ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆ ಲಕ್ಷ್ಮಿ ಎಂಬುವವರಿಗೆ ಹೆರಿಗೆಯಾಗಿತ್ತು ಎಂದು ತಿಳಿದು ಬಂದಿದ್ದು, ಬಳಿಕ ಬೆಳಿಗ್ಗೆಯಿಂದ ಮಗು ಹಾಗೂ ಲಕ್ಷ್ಮಿ ಅವರಿಗೆ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಇಂದು ಬೆಳಿಗ್ಗೆ ಮಗು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷದಿಂದ ಮಗು ಮೃತಪಟ್ಟಿದೆ ಎಂದು ಸಂಬಂಧಿಕರು ಆಸ್ಪತ್ರೆ ಮುಂಭಾಗ ಶವವನ್ನು ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.