ವೈದ್ಯೆ ಜೊತೆ ಅಸಭ್ಯ ವರ್ತನೆ – ಬಸ್ ಕ್ಲೀನರ್ ಬಂಧನ…

79
firstsuddi

ಮಂಗಳೂರು : ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಬಸ್ ಕ್ಲೀನರ್ ಅನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್ (26) ಬಂಧಿತ ಆರೋಪಿ.

ಖಾಸಗಿ ಬಸ್ ನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯೊಂದರ ವೈದ್ಯೆಗೆ, ತನ್ನ ಪ್ಯಾಂಟ್ ಜಿಪ್ ಓಪನ್ ಮಾಡಿ ಇಮ್ರಾನ್ ಅಸಭ್ಯವಾಗಿ ವರ್ತಿಸಿದ್ದಾನೆ.

ಪ್ಯಾಂಟ್ ಜಿಪ್ ಓಪನ್ ಮಾಡಿ ಅಸಭ್ಯ ನಡವಳಿಕೆ ತೋರಿದ ಎಂದು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ವೈದ್ಯೆ ದೂರಿನಲ್ಲಿ ದಾಖಲಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ದೂರು ನೀಡುವ ವಿಚಾರ ಗೊತ್ತಾಗಿ ಆರೋಪಿ ಇಮ್ರಾನ್ ಬೆದರಿಕೆಯನ್ನೂ ಹಾಕಿದ್ದ. ಸದ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 151/2022 U/s 354ರಡಿ ಕೇಸ್ ದಾಖಲಿಸಿಕೊಂಡಿದ್ದಾರೆ.