ವೈರಲ್ ಆಡಿಯೋಗೂ, ನನಗೂ ಸಂಬಂಧವಿಲ್ಲ : ನಳಿನ್ ಕುಮಾರ್ ಕಟೀಲ್.

106
firstsuddi

ಮಂಗಳೂರು : ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ವೈರಲ್ ಆಡಿಯೋ ಬಗ್ಗೆ ಸ್ವತಃ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ವೈರಲ್ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ನಮ್ಮಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳೇ ಇಲ್ಲ. ಹಾಗಾಗಿ, ಈ ವಿಷಯ ಅಪ್ರಸ್ತುತ. ಯಡಿಯೂರಪ್ಪ ನಮ್ಮ ಪಕ್ಷದ ಆತ್ಮ ಹಾಗೂ ಸರ್ವ ಸಮ್ಮತಿಯ ನಾಯಕ. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಮುಂತಾದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ನಮ್ಮ ಪಕ್ಷದ ಸರ್ಕಾರ ನಡೆಯುತ್ತಿದೆ. ತನಿಖೆ ಮೂಲಕ ಸತ್ಯ ಹೊರ ಬರಲಿ, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಆಡಿಯೋದಲ್ಲಿ ಏನಿದೆ?
ಯಾರಿಗೂ ಹೇಳಬೇಡ ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರ ಟೀಮ್ನ್ನು ತೆಗೆಯುತ್ತೇವೆ. ಹೊಸ ತಂಡವನ್ನು ಕಟ್ಟುತ್ತೇವೆ. ಈಗ ಸದ್ಯಕ್ಕೆ ಯಾರಿಗೂ ಹೇಳಬೇಡ. ದೆಹಲಿಯಿಂದನೇ ಮಾಡುತ್ತಾರೆ. ಏನೂ ಸಮಸ್ಯೆ ಇಲ್ಲ, ಭಯಪಡಬೇಡ, ನಾವಿದ್ದೇವೆ. ಯಾರೇ ಆದ್ರೂ ಎಲ್ಲ ನಮ್ಮ ಕೈಯಲ್ಲೇ ಇರುತ್ತೆ. ಮೂರು ಹೆಸರು ಇದೆ, ಇದರಲ್ಲಿ ಯಾರಾದರೂ ಆಗುವ ಚಾನ್ಸ್ ಇದೆ ಎಂದು ತುಳುವಿನಲ್ಲಿ ವ್ಯಕ್ತಿಯೊಬ್ಬರ ಜೊತೆ ನಳಿನ್ ಕುಮಾರ್ ಕಟೀಲ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.