ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಸ್.ನಾರಾಯಣ್ ಪುತ್ರ.

83
firstsuddi

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್. ನಾರಾಯಣ್ ಅವರ ಅವರ ಪುತ್ರ ಪಂಕಜ್ ನಾರಾಯಣ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ನಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಕಳೆದ ತಿಂಗಳು ರಕ್ಷಾ ಸುರೇಂದರ್ ಜೊತೆ ಪಂಕಜ್ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಮೈಸೂರಿನಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ನಡೆದಿದ್ದು, ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ. ಪಂಕಜ್ ಮತ್ತು ರಕ್ಷಾ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಎಸ್. ನಾರಾಯಣ್ ಅವರು ನಟನಾಗಿ, ನಿರ್ದೇಶಕನಾಗಿ ಅವರು ಸ್ಯಾಂಡಲ್ ವುಡ್ನಲ್ಲಿ ಖ್ಯಾತಿ ಗಳಿಸಿದ್ದಾರೆ. ಅವರ ಮಕ್ಕಳು ಕೂಡ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ಪುತ್ರ ಪವನ್ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದಾರೆ. ಎರಡನೇ ಪುತ್ರ ಪಂಕಜ್ ಅವರು ಸಾಕಷ್ಟು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ.