ವೈವಾಹಿಕ ಜೀವನಕ್ಕೆ ಕಾಲಿಟ್ಟ ವಸಿಷ್ಠ ಸಿಂಹ-ಹರಿಪ್ರಿಯಾ

54
firstsuddi

ಸ್ಯಾಂಡಲ್‌ವುಡ್‌ನ ಸ್ಟಾರ್ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಇಂದು ಸಿಂಹಪ್ರಿಯ ಜೋಡಿ ಮದುವೆ ಎಂಬ ಮುದ್ರೆ ಒತ್ತಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಈ ಜೋಡಿ ಹಸೆಮಣೆ ಏರಿದೆ. ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಸಿಂಹಪ್ರಿಯ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೈಸೂರಿನಲ್ಲಿ ಸರಳವಾಗಿ ವಿವಾಹವಾಗಿರುವ ಈ ಜೋಡಿ, ಜ.28ರಂದು ಸಿನಿಮಾರಂಗದ ಸ್ನೇಹಿತರಿಗೆ ಮತ್ತು ಗಣ್ಯರಿಗೆ ಬೆಂಗಳೂರಿನಲ್ಲಿ ಆರತಕ್ಷತೆ ಹಮ್ಮಿಕೊಂಡಿದ್ದಾರೆ. ನವಜೋಡಿಗೆ ಸೆಲೆಬ್ರಿಟಿಗಳು, ಸ್ನೇಹಿತರು, ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.