ವೋಟರ್ ಐಡಿ ಅಕ್ರಮ : ಅಮಾನತುಗೊಂಡಿದ್ದ ಇಬ್ಬರು ಐಎಎಸ್ ಅಧಿಕಾರಿಗಳು ಮರು ನೇಮಕ…

65
firstsuddi

ಬೆಂಗಳೂರು : ವೋಟರ್ ಐಡಿ ಪರಿಷ್ಕರಣೆಯಲ್ಲಿ ಕರ್ತವ್ಯ ಲೋಪ ಎಸಗಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಇಬ್ಬರು ಐಎಎಸ್ ಅಧಿಕಾರಿಗಳಾದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಮರು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಬೆಂಗಳೂರು ಲಿ. ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಶ್ರೀನಿವಾಸ್ ಅವರನ್ನು ನಿಯುಕ್ತಿಗೊಳಿಸಲಾಗಿದ್ದು, ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಇದರ ಎಕ್ಸಿಕ್ಯುಟಿವ್ ಡೈರೆಕ್ಟರ್ ಆಗಿ ಎಸ್.ರಂಗಪ್ಪ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ಕೇವಲ ಕೆಳಹಂತದ ಅಧಿಕಾರಿಗಳು ಭಾಗಿಯಾಗಿದ್ದರು ಎನ್ನಲಾಗಿತ್ತು. ಬಳಿಕ ಇಬ್ಬರು ಐಎಎಸ್ ಅಧಿಕಾರಿಗಳಾದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಭಾಗಿಯಾಗಿರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಈ ಇಬ್ಬರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿತ್ತು.