ಶಂಕಿತ ವ್ಯಕ್ತಿಗಳ ತಪಾಸಣೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು…

41
firstsuddi

ರಾಯಚೂರು: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಗಳ ತಪಾಸಣೆ ವೇಳೆ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಕಾಲುವೆ ಬಳಿ ನಡೆದಿದೆ.

ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್ ಪೇದೆ ಗಳಾದ ಮಂಜುನಾಥ್ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಕಾನ್ಸ್​ಟೇಬಲ್​ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಚ್ ಮಾಡಲಾಗಿದೆ.

ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಳಗಾನೂರ ಠಾಣೆಯಲ್ಲಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.