ಲಕ್ನೋ : ದೆಹಲಿ – ಘಾಜಿಯಾಬಾದ್ ನಡುವೆ ಸಂಚಾರ ನಡೆಸುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್ ಪ್ರೆಸ್ ನ ಲಗೇಜ್ ಬೋಗಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲು ನಿಲ್ದಾಣಕ್ಕೆ ಬರುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಬ್ಬಂದಿ ಕೂಡಲೇ ಅಗ್ನಿಶಾಮಕದಳ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ. ಕೂಡಲೇ ಬೋಗಿಯನ್ನು ಇತರ ಕೋಚ್ ಗಳಿಂದ ಬೇರ್ಪಡಿಸಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರವಾದ ತಿಳಿದು ಬಂದಿಲ್ಲ, ರೈಲಿನಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.










