ಶರಣಾಗಲು ಸಮಯ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಧು.

68
firstsuddi

ನವದೆಹಲಿ : 1988ರ ರೋಡ್ ರೇಜ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರು ಪೊಲೀಸರ ಮುಂದೆ ಶರಣಾಗಲು ಕೆಲವು ವಾರಗಳ ಕಾಲಾವಕಾಶ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಇಂದು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಧು ಪರ ವಿಷಯ ಪ್ರಸ್ತಾಪಿಸಿದರು. ಅವರು ಶೀಘ್ರದಲ್ಲೇ ಶರಣಾಗುತ್ತಾರೆ. ಆದ್ರೆ ಕೆಲವು ವಾರಗಳ ಅಗತ್ಯವಿದೆ. ಕಕ್ಷಿದಾರರು ತಮ್ಮ ವೈದ್ಯಕೀಯ ವ್ಯವಹಾರಗಳನ್ನು ಸಂಘಟಿಸಲು ಬಯಸುತ್ತಿದ್ದಾರೆ ಎಂದು ಪೀಠಕ್ಕೆ ಮನವಿ ಮಾಡಿದರು. ಪ್ರತಿಕ್ರಿಯಿಸಿದ ನ್ಯಾಯಪೀಠ, ಇದಕ್ಕೆ ಸಂಬಂಧಿಸಿದ ಪ್ರತ್ಯೇಕ ಔಪಚಾರಿಕ ಅರ್ಜಿ ಸಲ್ಲಿಸಿ. ಆ ಬಳಿಕ ನಾವು ಈ ವಿಚಾರದ ಬಗ್ಗೆ ಪರಿಶೀಲನೆ ನಡೆಸಿ ಆದೇಶ ನೀಡುತ್ತೇವೆ ಎಂದು ಹೇಳಿತು.

1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂಕೋರ್ಟ್ ನಿನ್ನೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.