ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು…

61
firstsuddi

ವಿಜಯಪುರ: ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ಆರ್.ಎಂ ಶಾಹಾ ಶಾಲೆ ಆವರಣದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಶಾಲೆಗೆ ಬಂದಿದ್ದ ಬಾಲಕ ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು 5 ವರ್ಷದ ಶಿವರಾಜ್ ರೋಡಗಿ ಎಂದು ಗುರುತಿಸಲಾಗಿದೆ. ಶಾಲಾ ಕಟ್ಟಡದಿಂದ ಕೆಳಗೆ ಬಿದ್ದ ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ್ದ ಎನ್ನಲಾಗಿದ್ದು, ಮೃತ ಬಾಲಕನ ಮೃತದೇಹವನ್ನು ಆಸ್ಪತ್ರೆಗೆ ತಂದ ಶಾಲಾ ಆಡಳಿತ ಮಂಡಳಿಯವರು, ಮೃತದೇಹವನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಇಂಡಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.