ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ – ಐದು ವಿದ್ಯಾರ್ಥಿಗಳಿಗೆ ಗಾಯ…

84
firstsuddi

ಉತ್ತರಕನ್ನಡ : ಶಾಲೆಯ ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐದು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಅಂಕೋಲದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿಯ ಪದರ ಕುಸಿದಿದೆ. ಈ ವೇಳೆ ತರಗತಿಯಲ್ಲಿ ಪಾಠ ಕೇಳುತಿದ್ದ ಐವರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲದ ತಹಶೀಲ್ದಾರ್ ಹಾಗೂ ಬಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.