ಶಾಲೆಗಳಲ್ಲಿ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲು ಶಿಕ್ಷಣ ಇಲಾಖೆ ಆದೇಶ…

63
firstsuddi

ಬೆಂಗಳೂರು : ಶಾಲೆಗಳಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆ ಶಾಲೆಗಳಲ್ಲಿ ಸರಳವಾಗಿ ಗಣರಾಜ್ಯೋತ್ಸವ ಆಚರಿಸುವಂತೆ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಆಯಾ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು ಸೇರಿ ಸರಳವಾಗಿ ಆಚರಿಸಲು ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.