ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್ – ವೈರಲ್ ಆಯ್ತು ವೀಡಿಯೋ…

76
firstsuddi

ಮೈಸೂರು : ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನೊಬ್ಬ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಖಾಲಿ ಕೊಠಡಿಯಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ರೊಮ್ಯಾನ್ಸ್ ಮಾಡುವ ದೃಶ್ಯವನ್ನು ವಿದ್ಯಾರ್ಥಿಗಳೇ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವೀಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ಶಾಲೆಯ ಶಿಕ್ಷಕನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಇಒ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.