ಶಾಸಕ ಜಮೀರ್ ಆಸ್ತಿ ಮೌಲ್ಯ 87 ಕೋಟಿ ; ಎಸಿಬಿ ದಾಳಿ ವೇಳೆ ಸತ್ಯ ಬಯಲು…

51
firstsuddi

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರ ಮನೆ, ಕಚೇರಿಗಳ ಮೇಲೆ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ದಾಳಿ ನಡೆಸಿತ್ತು. ತನಿಖೆಯ ಸಂದರ್ಭದಲ್ಲಿ ಜಮೀರ್ ಶೇ.2031ರಷ್ಟು ಅಕ್ರಮ ಆಸ್ತಿ ಅಂದರೆ 87,44,05,057 ರೂ. ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ.

ಜುಲೈ 5ರಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಸಮೀಪ ಬಂಬೂ ಬಜಾರ್ ನಲ್ಲಿರುವ ಜಮೀರ್ ಅವರ ಮನೆ, ಸದಾಶಿವ ನಗರದಲ್ಲಿರುವ ಅತಿಥಿ ಗೃಹ, ಕಲಾಸಿಪಾಳ್ಯದಲ್ಲಿನ ಅವರ ಒಡೆತನದ ನ್ಯಾಶನಲ್ ಟ್ರಾವೆಲ್ಸ್ ಕಂಪನಿಯ ಕಚೇರಿ, ಓಕಾ ಅಪಾರ್ಟ್ಮೆಂಟ್ ಫ್ಲ್ಯಾಟ್ ಹಾಗೂ ಬನಶಂಕರಿಯ ಜೆ.ಕೆ ಅಸೋಸಿಯೇಟ್ಸ್ ಕಚೇರಿ ಸೇರಿ ಐದು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.