ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ : ಸಿದ್ದರಾಮಯ್ಯ ಟ್ವೀಟ್…

170
firstsuddi

ಬೆಂಗಳೂರು : ಶಾಸಕ ತನ್ವೀರ್ ಸೇಠ್ ಅವರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ಮೂಲಕ ಪ್ರತಿಕ್ರಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಶಿಕ್ಷಿಸುವ ಜೊತೆಗೆ ಸಾರ್ವಜನಿಕ ಜೀವನದಲ್ಲಿರುವ ಗಣ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.