ಶಾಸಕ ಸಿ. ಟಿ ರವಿ ಅವರಿಗೆ ಪಿತೃ ವಿಯೋಗ…

141
firstsuddi

ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ತಿಮ್ಮೇಗೌಡ(92) ಅವರು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಸಿ.ಟಿ ರವಿ ಸೇರಿ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ನಾಳೆ ಸ್ವಗ್ರಾಮ ಚಿಕ್ಕಮಾಗರಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.