ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ!

61
firstsuddi

ಬೆಂಗಳೂರು : ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಬಾಣಸವಾಡಿಯ ಪಿಳ್ಳಾರೆಡ್ಡಿ ನಗರದಲ್ಲಿ ನಡೆದಿದೆ. ಬಾಣಸವಾಡಿಯ ಮರಿಯಮ್ ಸ್ಕೂಲ್ ನಲ್ಲಿ 10ನೇ ತರಗತಿ ಓದುತ್ತಿದ್ದ ಅಮೃತಾ ನೇಣಿಗೆ ಶರಣಾದ ವಿದ್ಯಾರ್ಥಿನಿ.

ಟೀಚರ್ ಎಲ್ಲಾ ವಿದ್ಯಾರ್ಥಿಗಳ ಮುಂದೆ ಬೈದಿದ್ದಾರೆಂದು ಮನನೊಂದು ನಿನ್ನೆ ಸಂಜೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದಾಳೆ. “Mom am sorry am not able to forget in school I cannot live with this guilty” ಎಂದು ಕೊನೆಯಲ್ಲಿ “I Love u mom, Daddy” ಅಂತ ಬರೆದಿದ್ದಾಳೆ.

ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.