ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಅಮಿತ್ ಶಾ.

75
firstsuddi

ತುಮಕೂರು : ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ ಹಿನ್ನೆಲೆ ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ್ದಾರೆ.

ತುಮಕೂರು ವಿವಿಯ ಹೆಲಿಪ್ಯಾಡ್ ಗೆ ಆಗಮಿಸಿದ ಅಮಿತ್ ಶಾರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಬಳಿಕ, ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠದತ್ತ ತೆರಳಿದ ಅಮಿತ್ ಶಾ ಅವರು, ಶ್ರೀಗಳ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರ ಬಸವ ಭಾರತ ಹೆಸರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಖೂಬಾ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗೇಶ್ವರ ಸ್ವಾಮೀಜಿ ಸೇರಿದಂತೆ ಹಲವಾರು ಸಾಧು ಸಂತರು ಭಾಗವಹಿಸಿದ್ದರು.