ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ ಮೋದಿ ಅವರಿಗೆ ಜ್ಞಾನೋದಯ ಮಾಡಿಸಿರಬಹುದು : ಹೆಚ್‍ಡಿಕೆ ವ್ಯಂಗ್ಯ…

174
firstsuddi

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರ ಹಣ ಬಿಡುಗಡೆ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಪ್ರಧಾನಿ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. “ಕೇಂದ್ರ ಸರ್ಕಾರ ಅಳೆದು ತೂಗಿ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಕೊಟ್ಟಿದೆ. ಬಹುಶಃ ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ ಮೋದಿ ಅವರಿಗೆ ಜ್ಞಾನೋದಯ ಮಾಡಿಸಿರಬಹುದು. ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು. ನೆರೆ ಪರಿಹಾರವಲ್ಲದೇ ರಾಜ್ಯಕ್ಕೆ ನ್ಯಾಯೋಚಿತವಾಗಿ ಬರಬೇಕಾದ ಅನುದಾನ ಸಾಕಷ್ಟಿದೆ. ತೆರಿಗೆ ಪಾಲು, ನರೇಗಾ ಅನುದಾನ, ಬರ ಪರಿಹಾರ.ಇವುಗಳನ್ನೆಲ್ಲ ಯಾವಾಗ ಕೊಡುತ್ತೀರಿ ಮೋದಿ ಅವರೇ? ಎಂದು ಟ್ವೀಟ್ ಮಾಡಿದ್ದಾರೆ.