ಶಿವಮೊಗ್ಗ : ನಿನ್ನೆ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು. ಇಂದು ಮುಂಜಾನೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (ಎನ್ಎಸ್ಯುಐ) ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದಾರೆ.
ನಿನ್ನೆ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷ ತೀವ್ರಗೊಂಡಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಕಾಲೇಜು ಅವರಣದಲ್ಲಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಎನ್ ಎಸ್ ಯುಐ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದಾರೆ. ಈ ವಿಚಾರ ತಿಳಿದು ಕಾಲೇಜಿನ ಸಿಬ್ಬಂದಿ ರಾಷ್ಟ್ರ ಧ್ವಜವನ್ನು ಇಳಿಸಿದ್ದಾರೆ.










