ಶಿವಮೊಗ್ಗ: ಹೋರಿ ತಿವಿದು ಯುವಕ ಸಾವು…

46
firstsuddi

ಶಿವಮೊಗ್ಗ: ಹೋರಿ ತಿವಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಯುವಕ ಪುನೀತ್ ಆಚಾರ್ (19) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ಹಾಸ್ಟೆಲ್‌ನಲ್ಲಿದ್ದುಕೊಂಡು ಐಟಿಐ ಓದುತ್ತಿದ್ದ. ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿದು ಗಂಭೀರವಾಗಿ ಗಾಯಗೊಂಡಿದ್ದ ಪುನೀತ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಪುನೀತ್ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.