ಶಿವಯೋಗ ಮಂದಿರದ ರೇವಣಸಿದ್ದ ಸ್ವಾಮಿಗಳು ನಿಧನ…

113
Firstsuddi

ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಕಾಳೇನಹಳ್ಳಿಯ ಶಿವಯೋಗ ಮಂದಿರದ ರೇವಣಸಿದ್ದ ಸ್ವಾಮಿಗಳು ಇಂದು ಮುಂಜಾನೆ ಲಿಂಗೈಕ್ಯರಾಗಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿಯವರು ಚಿಕ್ಕವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಅವರು ತಮ್ಮ ಸಮಾಜಮುಖಿ ಚಿಂತನೆಗಳ ಮೂಲಕ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಶಿಕಾರಿಪುರ ತಾಲ್ಲೂಕಿನ ನಡೆದಾಡುವ ದೇವರು ಎಂದೇ ಪ್ರಸಿದ್ದಿ ಪಡೆದುಕೊಂಡಿದ್ದರು.

ಸ್ವಾಮಿಜೀಗಳು ಎಲ್ಲ ಧರ್ಮದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಸ್ವಾಮೀಜಿ ಅವರ ನಿಧನದಿಂದ ನಾವು ಹಿರಿಯ ಅಧ್ಯಾತ್ಮಿಕ ಚೇತನ ಕಳೆದುಕೊಂಡಿದ್ದೇವೆ. ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ.