ಶಿವಸೇನಾ ಸಂಸದ ಸಂಜಯ್ ರಾವತ್ 4 ದಿನ ಇಡಿ ಕಸ್ಟಡಿಗೆ…

65
firstsuddi

ಮುಂಬೈ : ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ.

ತನಿಖಾ ಸಂಸ್ಥೆ ಸಂಜಯ್ ರಾವತ್ ಅವರನ್ನು ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು. ಆದರೆ ಮುಂಬೈ ವಿಶೇಷ ನ್ಯಾಯಾಲಯ 4 ದಿನಗಳ ಕಾಲ ಕಸ್ಟಡಿಗೆ ನೀಡಿದೆ.

ಇಡಿ ಕಸ್ಟಡಿಯಲ್ಲಿ ಸಂಜಯ್ ರಾವತ್ ಗೆ ಮನೆಯಲ್ಲಿ ತಯಾರಿಸಿದ ಆಹಾರ ಮತ್ತು ಔಷಧವನ್ನು ತೆಗೆದುಕೊಳ್ಳಲು ಅನುಮತಿಸಲಾಗಿದೆ. ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆ ಮತ್ತು ವಿಚಾರಣೆಯ ಸಮಯದಲ್ಲಿ ಅಗತ್ಯವಿದ್ದಲ್ಲಿ ಸಹ ಚಿಕಿತ್ಸೆ ಬಗ್ಗೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.