ಶ್ರೀನಗರ : ಇಂದು ಬೆಳಗ್ಗೆ ಜಮ್ಮ-ಕಾಶ್ಮೀರದ ಶೋಪಿಯಾನ್ ನ ಕಂಜಿಯುಲಾರ್ ಪ್ರದೇಶದಲ್ಲಿ ಎನ್‍ಕೌಂಟರ್ ನಡೆದಿದ್ದು, ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು.
ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ ಇಟಿಯೊಂದಿಗೆ ಸಂಬಂಧ ಹೊಂದಿರುವ ಇಬ್ಬರು ಉಗ್ರರು ಹತರಾಗಿದ್ದಾರೆ. ಹತ್ಯೆಯಾದ ಉಗ್ರರಲ್ಲಿ ಒಬ್ಬನನ್ನು ಶೋಪಿಯಾನ್ ನ ಜನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ. ಈತ ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದನು ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.










