ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಆದಿಶಕ್ತಿ ಪರಾಶಕ್ತಿ ದೇವಿಯ ವಾರ್ಷಿಕ ಉತ್ಸವ…

50
firstsuddi

ಚಿಕ್ಕಮಗಳೂರು : ಮೇಲ್‍ಮರವತ್ತೂರು ಶ್ರೀ ಆದಿಶಕ್ತಿ ಪರಾಶಕ್ತಿ ದೇವಿಯ ವಾರ್ಷಿಕ ಉತ್ಸವ ಇಲ್ಲಿನ ಲಕ್ಷ್ಮೀಶನಗರದಲ್ಲಿ ನೂರಾರು ಭಕ್ತರ ನಡುವೆ ಇಂದು ಶ್ರದ್ಧಾಭಕ್ತಿಯಿಂದ ನಡೆಯಿತು.

ಉತ್ಸವದ ಪ್ರಯುಕ್ತ ದೇವಾಲಯದಲ್ಲಿ ಬೆಳಿಗ್ಗೆ ಗಣಪತಿ ಪೂಜೆ, ಶ್ರೀ ಆದಿಪರಾಶಕ್ತಿ ಅಮ್ಮನವರಿಗೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ, ಪುಷ್ಪಾರ್ಚನೆ, ಮಾಲಾಧಾರಿಗಳು ಮತ್ತು ಭಕ್ತರಿಂದ ಸಾಮೂಹಿಕ ಭಜನೆ, ಸ್ತ್ರೋತ್ರ ಪಠಣ, ಅಷ್ಟೋತ್ತರ, ನಾಮಸಂಕೀರ್ತನೆ ಜರುಗಿತು.
ಮಧ್ಯಾಹ್ನ ಮಹಾಮಂಗಳಾರತಿಯ ನಂತರ ಶ್ರೀ ಆದಿಪರಾಶಕ್ತಿ ಭಕ್ತ ಮಂಡಳಿಯಿಂದ ಬಡವರಿಗೆ ವಸ್ತ್ರದಾನ ಮಾಡಲಾಯಿತು. ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ಉತ್ಸವದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಮಾತನಾಡಿದ ಭಕ್ತ ಮಂಡಳಿ ಅಧ್ಯಕ್ಷ ಸಿ.ಬಿ.ನಾಗರಾಜ್ ಲೋಕಕಲ್ಯಾಣಾರ್ಥವಾಗಿ ಕಳೆದ 18 ವರ್ಷಗಳಿಂದ ನಿರಂತರವಾಗಿ ದೇವಿಯ ಉತ್ಸವವನ್ನು ನಡೆಸಲಾಗುತ್ತಿದೆ ಎಂದರು.

ರಥೋತ್ಸವಗಳು ಮತ್ತು ಉತ್ಸವಗಳಲ್ಲಿ ಪಾಲ್ಗೊಳ್ಳುವುದರಿಂದ ಪುಣ್ಯದ ಜೊತೆಗೆ ಮಾನಸಿಕ ಶಾಂತಿ, ನೆಮ್ಮದಿ ದೊರೆಯುತ್ತದೆ, ಸಮಾಜದಲ್ಲಿ ಭಾವೈಕ್ಯತೆ ಬೆಳೆಯುತ್ತದೆ ಎಂದು ತಿಳಿಸಿದರು.

ಶಾಸಕ ಸಿ.ಟಿ.ರವಿ ಅವರ ಪತ್ನಿ ಪಲ್ಲವಿ ರವಿ, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಉಪಾಧ್ಯಕ್ಷೆ ಉಮಾದೇವಿ, ಆಯುಕ್ತ ಬಸವರಾಜ್, ಸದಸ್ಯ ಗೋಪಿ, ಜೆಡಿಎಸ್ ಮುಖಂಡ ತಿಮ್ಮಶೆಟ್ಟಿ, ಸವಿತಾ ಸಮಾಜದ ಮುಖಂಡ ಜೆ.ಸತ್ಯನಾರಾಯಣ, ಭಕ್ತ ಮಂಡಳಿಯ ಮುಖಂಡರಾದ ಎಂ.ಅಣ್ಣಪ್ಪ, ಚಂದ್ರು, ಎನ್.ಕುಮಾರ್, ಮಧು, ರತ್ಮಮ್ಮ, ಚನ್ನಮ್ಮ ಉತ್ಸವದಲ್ಲಿ ಪಾಲ್ಗೊಂಡಿದ್ದರು.